×
Ad

ಕಾಪು: ಶಾಲಾ ವಾಹನಕ್ಕೆ ಟಿಪ್ಪರ್ ಢಿಕ್ಕಿ

Update: 2018-07-30 23:17 IST

ಕಾಪು, ಜು. 30: ಶಾಲಾ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದ ಘಟನೆ ಸೋಮವಾರ ಕಾಪು ಸಮೀಪದ ಮಲ್ಲಾರಿನಲ್ಲಿ ನಡೆದಿದೆ.

ಮಜೂರಿನಲ್ಲಿರುವ ಕ್ರೆಸೆಂಟ್ ಇಂಟರ್‌ನ್ಯಾಷನಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ಓವರ್‌ಟೇಕ್ ಭರಾಟೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ವಾಹನದಲ್ಲಿ ಇಪ್ಪತ್ತಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಪವಾಡ ಸದೃಶವಾಗಿ ಪಾರಾಗಿದ್ದಾರೆ. ಚಾಲಕನ ಅಜಾಗರೂಕತೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News