ಉಡುಪಿ: ಬಡ ಕುಟುಂಬಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Update: 2018-07-31 18:45 IST
ಉಡುಪಿ, ಜು.31: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ 2.50 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಇತರೆ ಬಡ ವರ್ಗದ ಕುಟುಂಬದ ಸದಸ್ಯರಿಗೆ 2018-19ನೇ ಸಾಲಿನಲ್ಲಿ ಶೇ.7.25ರ ನಿಧಿಯಡಿ ಸೌಲ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಅಂಕಪಟ್ಟಿಯ ದೃಢೀಕೃತ ಪ್ರತಿ (ವಿದ್ಯಾರ್ಥಿವೇತನಕ್ಕೆ), ವ್ಯಾಸಂಗ ಪ್ರಮಾಣ ಪತ್ರದ ಮೂಲ ಪ್ರತಿ, ಹಿಂದುಳಿದ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರಗಳನನು ಆ.20ರ ಒಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಡುಪಿ ನಗರಸಭೆಯ ಪೌರಾಯುಕ್ತರನ್ನು ಸಂಪರ್ಕಿ ಸುವಂತೆ ಪ್ರಕಟಣೆ ತಿಳಿಸಿದೆ.