ಪಿಎಫ್‌ಐ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2018-07-31 13:50 GMT

ಬೆಂಗಳೂರು, ಜು.31: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಉನ್ನತ ಶಿಕ್ಷಣ ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ವೇತನ ಸೌಲಭ್ಯ ನೀಡುವ ಸಲುವಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಪಿಯುಸಿ ಪೂರ್ಣಗೊಳಿಸಿ ಉನ್ನತ ಶಿಕ್ಷಣವನ್ನು ಪಡೆಯಲಿಚ್ಛಿಸುವ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವಾಗಲು, 2018-19ರ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ನಾತಕೋತ್ತರ ಪದವಿ, ಪದವಿ, ಡಿಪ್ಲೋಮಾ ಅಥವಾ ಇತರ ಉನ್ನತ ಶಿಕ್ಷಣ ಪಡೆಯುತ್ತಿರುವ, ಒಂದು ವರ್ಷದ ಅವಧಿಗಿಂತ ಕಡಿಮೆಯಿಲ್ಲದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪತ್ರಿಕೋದ್ಯಮ, ಕಾನೂನು ಮತ್ತು ಸಮಾಜ ಸೇವೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಜಿಯನ್ನು ಆ.31ರೊಳಗೆ ವೆಬ್‌ಸೈಟ್ www.popularfrontindia.org ನಲ್ಲಿ ಸಲ್ಲಿಸಬಹುದಾಗಿದೆ. ಪಿಎಫ್‌ಐ 2011-12ರ ಶೈಕ್ಷಣಿಕ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪ್ರಾರಂಭಿಸಿತ್ತು. ಇದುವರೆಗೂ 6.4 ಕೋಟಿ ರೂಪಾಯಿ ವೆಚ್ಚದ ವಿದ್ಯಾರ್ಥಿ ವೇತನವನ್ನು 7,366 ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News