×
Ad

ದಾಖಲಾತಿ ಪರಿಶೀಲನೆ ಮತ್ತು ಸೀಟು ಹಂಚಿಕೆ

Update: 2018-07-31 19:52 IST

ಬೆಂಗಳೂರು, ಜು.31: ಸರಕಾರದ ನಿರ್ದೇಶನದಂತೆ 2018ನೆ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅರ್ಹತೆಯನ್ನು ಪಡೆದು ಸಿಇಟಿ-2018ಕ್ಕೆ ಹಾಜರಾಗಿರುವ ಅಭ್ಯರ್ಥಿಗಳಿಗೆ ಎರಡನೆ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಯುವ ಇಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗುವುದು.

2018ನೆ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳ ಅಂಕಗಳನ್ನು ನೇರವಾಗಿ ಇಲಾಖೆಯಿಂದ ಪಡೆಯಲಾಗುವುದು. ಇತರೆ ಬೋರ್ಡ್‌ಗಳಿಂದ(CBSE, CISCE, 10+2) 2018ನೆ ಸಾಲಿನಲ್ಲಿ 12ನೇ ತರಗತಿಯನ್ನು ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಸಿಇಟಿ-2018ನೇ ಸಾಲಿನ ಪ್ರವೇಶ ಪತ್ರದೊಂದಿಗೆ ಪ್ರಾಧಿಕಾರಕ್ಕೆ ಆ.1ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in  ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News