×
Ad

ಉಡುಪಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Update: 2018-07-31 21:01 IST

 ಉಡುಪಿ, ಜು.31: ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಒಳಕಾಡು ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮಂಗಳವಾರ ಉಡುಪಿಯ ನಾರ್ತ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ಕಾರ್ಪೊರೇಶನ್ ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕ ಶ್ಯಾಮ್‌ಪ್ರಸಾದ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಉದ್ಯಮಿ ಅಮೃತ್ ಶೆಣೈ, ನಗರಸಭಾ ಸದಸ್ಯ ಶ್ಯಾಮ್‌ಪ್ರಸಾದ್ ಕುಡ್ವ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಮ್ಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ದನ ಭಂಡಾರ್‌ಕರ್, ಸಮನ್ವಯ ಅಧಿಕಾರಿ ಉಮಾ, ಶಿಕ್ಷಣ ಸಂಯೋಜಕ ಸುರೇಶ್ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ, ಬಳಕೆದಾರರ ವೇದಿಕೆ ಸಂಚಾಲಕ ದಾಮೋದರ ಐತಾಳ್ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ಛದ್ಮವೇಷ ಸ್ಪರ್ಧೆ, ಜನಪದ ನೃತ್ಯ, ಭಾವಗೀತೆ, ಅಭಿನಯ ಗೀತೆ, ತುಳು ಕಂಠಪಾಠ, ಸಂಸ್ಕೃತ ಕಂಠಪಾಠ, ಅರೇಬಿಕ್ ಧಾರ್ಮಿಕ ಪಠಣ, ಕ್ಲೇ ಮಾಡೆಲ್, ಆಶು ಭಾಷಣ ಸ್ಪರ್ಧೆ, ಭರತನಾಟ್ಯ, ಚಿತ್ರಕಲೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಸ್ಪರ್ಧೆಗಳು ನಡೆದವು.
ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ ಸ್ವಾಗತಿಸಿದರು. ಶೋಭಾ ಶೆಟ್ಟಿ ವಂದಿಸಿದರು. ನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News