ಸಾಲಿಗ್ರಾಮ ಪಟ್ಟಣ ಪಂಚಾಯತ್: ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜು.31: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ/ಪಂಗಡ ಜನರಿಗೆ ಹಾಗೂ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಎಸ್‌ಎಫ್‌ಸಿ ನಿಧಿ ಮತ್ತು ಪಟ್ಟಣ ಪಂಚಾಯತ್ ನಿಧಿಯಿಂದ 2018-19ನೇ ಸಾಲಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪಂಗಡದವರಿಗೆ ವಿದ್ಯಾರ್ಥಿವೇತನ (ಎಸೆಸೆಲ್ಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮಾತ್ರ), ಅಡುಗೆ ಅನಿಲ ಸಂಪರ್ಕ, ಪಕ್ಕಾ ಮನೆ ನಿರ್ಮಾಣ, ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ, ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ವಿಕಲಚೇತನರಿಗೆ ವಿದ್ಯಾರ್ಥಿ ವೇತನ, ಅಡುಗೆ ಅನಿಲ ಸಂಪರ್ಕ, ವೈದ್ಯಕೀಯ ವೆಚ್ಚದ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ರೇಷನ್‌ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ ಪ್ರತಿ, 2018-19ನೇ ಸಾಲಿನ ಮನೆ ತೆರಿಗೆ ಪಾವತಿ ಪ್ರತಿ, ಜಾತಿ/ ಆದಾಯ ಪ್ರಮಾಣ ಪತ್ರ, ಫೋಟೊ, ಆಧಾರ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ವಿದ್ಯಾರ್ಥಿಗಳು ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ ಹಾಗೂ ಪ್ರಸ್ತುತ ಸಾಲಿನ ವ್ಯಾಸಂಗ ದೃಢೀಕರಣ ಪತ್ರವನ್ನು ಉಳಿದ ದಾಖಲೆಗಳೊಂದಿಗೆ ಸಲ್ಲಿಸಬೇಕು, ವಿಕಲಚೇತನರು ವಿಕಲಚೇತನ ದೃಢೀಕರಣ ಪತ್ರದ ಪ್ರತಿಯನ್ನು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.