×
Ad

​ಹುಸೇನಬ್ಬ ಕೊಲೆ ಪ್ರಕರಣ: ಹಿರಿಯಡ್ಕ ಎಸ್ಸೈಗೆ ಹೈಕೋರ್ಟ್ ಜಾಮೀನು

Update: 2018-07-31 21:42 IST

ಉಡುಪಿ, ಜು.31: ಪೆರ್ಡೂರು ದನದ ವ್ಯಾಪಾರಿ ಹುಸೇನಬ್ಬ ಕೊಲೆ ಪ್ರಕರಣದ ಆರೋಪಿ ಹಿರಿಯಡ್ಕ ಎಸ್ಸೈ ಡಿ.ಎನ್.ಕುಮಾರ್‌ಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್, ಎಸ್ಸೈ ಡಿ.ಎನ್.ಕುಮಾರ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿ ಸಿ.ಎಚ್. ಜಾದವ್ ವಾದಿಸಿದ್ದರು.

ಡಿ.ಎನ್.ಕುಮಾರ್, ಠಾಣೆ ಜೀಪು ಚಾಲಕ ಗೋಪಾಲ್ ಸೇರಿದಂತೆ ಎಂಟು ಮಂದಿ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 18ರಂದು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಉಳಿದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News