ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡೆವು: ಎಂ.ಬಿ.ಪಾಟೀಲ್

Update: 2018-07-31 16:15 GMT

ಬೆಂಗಳೂರು, ಜು.31: ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಯಾವುದೇ ಭೇದ ಮಾಡುವುದಿಲ್ಲ. ನಾವು ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಗ್ರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಧ್ಯೇಯ. ಉತ್ತರ ಕರ್ನಾಟಕದ ಪ್ರದೇಶ ಹೆಚ್ಚಿನ ಅಭಿವೃದ್ಧಿಯಾಗಬೇಕು ಎಂಬುದು ಜನರ ಅಪೇಕ್ಷೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದೆ. ಎರಡೂ ಪಕ್ಷಗಳ ಒಪ್ಪಿಗೆ ಪಡೆದು ಮುಖ್ಯಮಂತ್ರಿಯು ಕೆಲಸ ಮಾಡಬೇಕು ಎಂದ ಅವರು, ಸಿಎಂ ಕುಮಾರಸ್ವಾಮಿ ಉತ್ತರ ಕರ್ನಾಟಕದ ಜನರ ಬಗ್ಗೆ ಮಾತನಾಡಿರೋದು ಗೊತ್ತಿಲ್ಲ. ಪಕ್ಷದ ಪರವಾಗಿ ಅವರು ಮಾತನಾಡಿದರೆ ಅದು ಅವರ ಪಕ್ಷದ ವಿಚಾರ. ಆದರೆ, ಸಮ್ಮಿಶ್ರ ಸರಕಾರದಲ್ಲಿರುವ ವೇಳೆ ಎಲ್ಲವನ್ನೂ ಅರಿತು ನಡೆದುಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಗೆ ಹಾಗೂ ಪಕ್ಷದ ವೇದಿಕೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತೇನೆ. ಆದರೆ, ರಾಜ್ಯ ಇಬ್ಭಾಗದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ದುರಂತ. ಅಲ್ಲದೆ, ಈ ವಿಚಾರವನ್ನಿಟ್ಟುಕೊಂಡು ಮಾಜಿ ಸಿಎಂ ಯಡಿಯೂರಪ್ಪ ಪ್ರವಾಸ ನಡೆಸುತ್ತಿರುವುದು ವಿಪರ್ಯಾಸ ಎಂದು ಲೇವಡಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News