ಗಾಂಜಾ ಮಾರಾಟ; ಆರೋಪಿ ಬಂಧನ; ಸೊತ್ತು ವಶ

Update: 2018-07-31 17:22 GMT

ಮಂಗಳೂರು, ಜು.31: ನಗರದ ಫೆಲಿಕ್ಸ್ ಪೈ ಬಜಾರ್‌ನ ಕಾಂಚನಾ ವೈನ್‌ಶಾಪ್ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು, ಸಾವಿರಾರು ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 20 ಸಾವಿರ ರೂ. ಮೌಲ್ಯದ 1.70 ಕೆ.ಜಿ. ಗಾಂಜಾ ಸೇರಿದಂತೆ 500 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಯೊಂದಿಗೆ ಮಂಗಳವಾರ ರೌಂಡ್ಸ್ ಕರ್ತವ್ಯದಲಿದ್ದಾಗ ಗಾಂಜಾ ಮಾರಾಟ ಮಾಡುತ್ತಿರು ವುದು ಬೆಳಕಿಗೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News