×
Ad

ನೇಣು ಬಿಗಿದು ಆತ್ರಾಡಿ ವಿಎ ಆತ್ಮಹತ್ಯೆ

Update: 2018-07-31 23:05 IST

ಮಣಿಪಾಲ, ಜು. 31: ಆತ್ರಾಡಿ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಿಗರಾದ ವನಿತಾ (34) ಎಂಬವರು ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪರ್ಕಳ ಹೆರ್ಗ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಎರಡು ವರ್ಷಗಳ ಹಿಂದೆ ಕಾರ್ಕಳದಿಂದ ವರ್ಗಾವಣೆಗೊಂಡು ಆತ್ರಾಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರ ಇಬ್ಬರು ಮಕ್ಕಳು ಶಾಲೆಗೆ ಹೋಗಿದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತಿ ಜು. 28ರಂದು ದುಬೈಗೆ ತೆರಳಿದ್ದಾರೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News