ಶಾಸಕ ಶ್ರೀರಾಮುಲು ವಿರುದ್ಧ ದೂರು ದಾಖಲು

Update: 2018-08-01 13:19 GMT

ಬೆಂಗಳೂರು, ಆ.1: ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ, ಶಾಸಕ ಬಿ.ಶ್ರೀರಾಮುಲು ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬುಧವಾರ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಎ.ಪ್ರಸಾದ್ ನೇತೃತ್ವದ ಸದಸ್ಯರು, ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿ, ಶ್ರೀರಾಮುಲು ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸಾದ್, ಜು.27ರಂದು ಬಳ್ಳಾರಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮುಲು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣದ ಮಾದರಿಯಲ್ಲಿ ಹೋರಾಟ ಆರಂಭಿಸಬೇಕು. ಇದಕ್ಕಾಗಿ ಆ.2ರಂದು ಬಂದ್‌ಗೆ ಕರೆ ನೀಡಬೇಕು ಎಂದೆಲ್ಲಾ ಹೇಳಿದ್ದಾರೆ ಎಂದರು.

ಬಿ.ಶ್ರೀರಾಮುಲು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡಿರೋದು ತಪ್ಪು ಎಂದು ಕರ್ನಾಟಕ ರಾಜ್ಯ ಪುನರ್ ವಿಂಗಡಣೆ ಕಾಯ್ದೆ ಅಡಿಯಲ್ಲಿ ದೂರು ನೀಡಲಾಗಿದ್ದು, ಗೃಹ ಇಲಾಖೆ ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News