×
Ad

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಗೆ ಸೆ. 28ರವರೆಗೆ ಮಧ್ಯಂತರ ರಕ್ಷಣೆ

Update: 2018-08-01 19:42 IST

ಹೊಸದಿಲ್ಲಿ, ಆ. 1: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಸೆಪ್ಟಂಬರ್ 28ರ ವರೆಗೆ ಬಂಧಿಸದಂತೆ ದಿಲ್ಲಿ ಉಚ್ಚ ನ್ಯಾಯಾಲಯ ಮಧ್ಯಂತರ ಭದ್ರತೆ ವಿಸ್ತರಿಸಿದೆ.

 ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಬಂಧಿಸದಂತೆ ಮಧ್ಯಂತರ ರಕ್ಷಣೆ ಕೋರಿ ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಮಾಜಿ ಪತ್ರಿಕೋದ್ಯಮಿ ಪೀಟರ್ ಮುಖರ್ಜಿ ಹಾಗೂ ಅವರ ಪತ್ನಿ ಇಂದ್ರಾಣಿ ಮುಖರ್ಜಿ ಅವರ ಉದ್ಯಮ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಉತ್ತೇಜನ ಮಂಡಳಿ (ಎಫ್‌ಐಪಿಬಿ) ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಚಿದಂಬರಂ ಹಾಗೂ ಅವರ ಪುತ್ರ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪರಿಶೀಲನೆಯಲ್ಲಿದ್ದಾರೆ. ಯುಪಿಎ ಸರಕಾರದ ಅವಧಿಯಲ್ಲಿ ಚಿದಂಬರಂ ಅವರು ಹಣಕಾಸು ಸಚಿವಾರಾಗಿದ್ದ ಸಂದರ್ಭ 2007ರಲ್ಲಿ ಈ ಭ್ರಷ್ಟಾಚಾರ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News