ಆ.5: ಪಾಣೆಮಂಗಳೂರಿನಲ್ಲಿ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ

Update: 2018-08-02 11:13 GMT

ಬಂಟ್ವಾಳ, ಆ.2: ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪ್ರಾಥಮಿಕ ಮಾದ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ದ.ಕ. ಜಿಲ್ಲಾ ಘಟಕದ ವತಿಯಿಂದ ದ.ಕ., ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಿಕ್ಷಕರಿಗಾಗಿ ಆ.5ರಂದು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಶಿಕ್ಷಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು. ಅಲ್ಲದೆ ಶಿಕ್ಷಕರ ಕುಂದುಕೊರತೆಗಳೇನಾದರೂ ಇದ್ದರೆ ಸಂಘದ ರಾಜ್ಯಾಧ್ಯಕ್ಷರ ಸಮಕ್ಷಮದಲ್ಲಿ ಚರ್ಚಿಸಿ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳಬಹುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಧನರಾಜು ಡಿ.ಆರ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News