ಇಂಗ್ಲೆಂಡ್‌ನಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಕೊಹ್ಲಿ

Update: 2018-08-02 17:43 GMT

ಬರ್ಮಿಂಗ್‌ಹ್ಯಾಮ್, ಆ.2: ಭಾರತದ ನಾಯಕ ವಿರಾಟ್ ಕೊಹ್ಲಿ ಮೊದಲನೇ ಟೆಸ್ಟ್‌ನ ಎರಡನೇ ದಿನವಾದ ಗುರುವಾರ ಇಂಗ್ಲೆಂಡ್ ನೆಲದಲ್ಲಿ ಚೊಚ್ಚಲ ಶತಕ ಸಿಡಿಸಿದರು.

2014ರಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸಕೈಗೊಂಡಿದ್ದಾಗ 10 ಇನಿಂಗ್ಸ್‌ಗಳಲ್ಲಿ ಕೇವಲ 134 ರನ್ ಗಳಿಸಿ ಪರದಾಟ ನಡೆಸಿದ್ದ ಕೊಹ್ಲಿ ಇಂದು ನಡೆದ ಪಂದ್ಯದಲ್ಲಿ ತಂಡ ಮಧ್ಯಮ ಸರದಿ ಕುಸಿತಕ್ಕೊಳಗಾದ ಸಂದರ್ಭದಲ್ಲಿ ಇಂಗ್ಲೆಂಡ್ ವೇಗಿಗಳಾದ ಸ್ಯಾಮ್ ಕರನ್ ಹಾಗೂ ಬೆನ್ ಸ್ಟೋಕ್ಸ್ ದಾಳಿಯನ್ನು ದಿಟ್ಟವಾಗಿ ಎದುರಿಸಿದರು.

29ರ ಹರೆಯದ ಕೊಹ್ಲಿ ಅವರು ಸ್ಟೋಕ್ಸ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ 172 ಎಸೆತಗಳಲ್ಲಿ 14 ಬೌಂಡರಿಗಳ ಸಹಾಯದಿಂದ 22ನೇ ಶತಕ ಪೂರೈಸಿದರು.

 21 ರನ್ ಗಳಿಸಿದ್ದಾಗ ಜೀವದಾನ ಪಡೆದಿದ್ದ ಕೊಹ್ಲಿ 100 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೊಹ್ಲಿ ಮತ್ತೊಮ್ಮೆ ಡೇವಿಡ್ ಮಲಾನ್‌ರಿಂದ ಜೀವದಾನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News