ಉಡುಪಿ: ಪೊಲೀಸ್ ಫೋನ್‌ಇನ್ ಕಾರ್ಯಕ್ರಮ
Update: 2018-08-02 22:41 IST
ಉಡುಪಿ, ಆ.2: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ನೇರ ಫೋನ್ ಇನ್ ಕಾರ್ಯಕ್ರಮ ನಾಳೆ ಬೆಳಗ್ಗೆ 10 ರಿಂದ 11ಗಂಟೆಯವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆಯಲಿದೆ.
ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು. ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧ ಪಟ್ಟಂತೆ ಸಲಹೆಗಳು ಅಥವಾ ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳ ಬಹುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೇರ ಫೋನ್‌ಇನ್ ಕಾರ್ಯಕ್ರಮಕ್ಕೆ ಕರೆ ಮಾಡುವವರ ವಿವರಗಳನ್ನು ಗುಪ್ತವಾಗಿ ಇಡಲಾಗುವುದು. ನೇರ ಫೋನ್ ಇನ್‌ಗೆ ಸಂಪರ್ಕಿಸುವ ಸ್ಥಿರ ದೂರವಾಣಿ ಸಂಖ್ಯೆ: 0820-2534777. ಸಮಯ: ಬೆಳಗ್ಗೆ 10 ರಿಂದ 11 ಗಂಟೆ.