ಅಸ್ಸಾಂ ನಾಗರಿಕರ ಪಟ್ಟಿಯಿಂದ ಭಾರತೀಯರನ್ನು ಕೈಬಿಡುವುದಿಲ್ಲ

Update: 2018-08-03 07:18 GMT

ಹೊಸದಿಲ್ಲಿ, ಆ.3: ಅಸ್ಸಾಂನಲ್ಲಿ ಬಿಡುಗಡೆ ಮಾಡಿರುವ  ನಾಗರಿಕರ ರಾಷ್ಟ್ರೀಯ ನೋಂದಣಿಯ ಅಂತಿಮ ಕರಡು ಪಟ್ಟಿಯಲ್ಲಿ 40 ಲಕ್ಷ ಜನರನ್ನು ಕೈಬಿಟ್ಟಿರುವುದು ದೊಡ್ಡ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್, ಇದೊಂದು ಕೇವಲ ಕರಡು ಪಟ್ಟಿಯಾಗಿದ್ದು ಇದರಲ್ಲಿ ತಾರತಮ್ಯ ಹಾಗೂ ಅನಗತ್ಯ ಕಿರುಕುಳ ಇರುವುದಿಲ್ಲ ಎಂದು ಹೇಳಿದ್ದಾರೆ.

‘‘ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿಯ(ಎನ್‌ಆರ್‌ಸಿ) ಪಟ್ಟಿಯ ಪ್ರಕ್ರಿಯೆ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿದೆ. ಸುಪ್ರೀಂಕೋರ್ಟಿನ ಮಾರ್ಗದರ್ಶನದ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ. ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡುವೆ. ಯಾರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಎನ್‌ಆರ್‌ಸಿ ಅಂತಿಮ ಪಟ್ಟಿಯಿಂದ ಹೊರಗುಳಿದಿರುವ ನಾಗರಿಕರು ವಿದೇಶಿಗರ ಟ್ರಿಬ್ಯೂನಲ್‌ಗೆ ಮೇಲ್ಮನವಿ ಸಲ್ಲಿಸಬಹುದು’’ ಎಂದು ರಾಜ್ಯಸಭೆಯಲ್ಲಿ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News