ಬೋಳಂಗಡಿಯಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Update: 2018-08-03 10:06 GMT

ಬಂಟ್ವಾಳ, ಆ‌.3: ಕಾರು, ಬೈಕ್ ಮತ್ತು ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಶುಕ್ರವಾರ  ಸಂಭವಿಸಿದೆ.

ಕಾರೊಂದು ಹಿಂಬಂದಿಯಿಂದ ಬೈಕ್ ಗೆ ಢಿಕ್ಕಿಹೊಡೆದು ಬಳಿಕ ಮತ್ತೊಂದು ವಾಹನಕ್ಕೆ ಢಿಕ್ಕಿಯಾಗಿ ಈ ಸರಣಿ ಅಘಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿದ್ದ ಬೈಕ್ ಗೆ ಢಿಕ್ಕಿಯಾಗಿದೆ‌. ಬಳಿಕ ಮುಂದಕ್ಕೆ ಚಲಿಸಿದ ಕಾರು ಪಿಕಪ್ ವಾಹನಕ್ಕೆ ಢಿಕ್ಕಿಯಾಗಿದೆ.

ಘಟನೆಯಲ್ಲಿ ಕಾರು ಚಾಲಕ, ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ‌‌. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಬೈಕ್, ಕಾರು ನಜ್ಜುಗುಜ್ಜಾಗಿದ್ದು, ಪಿಕಪ್ ವಾಹನ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು  ಭೇಟಿ ನೀಡಿದ್ದಾರೆ. ಘಟನೆಯಿಂದ  ರಾಷ್ಟ್ರೀಯ ಹೆದ್ದಾರಿಯ  ಬೋಳಂಗಡಿಯಲ್ಲಿ ಕೆಲಕಾಲ ರಸ್ತೆ ಸಂಚಾರದಲ್ಲಿ ತೊಡಕುಂಟಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News