ಮಾದಕ ವಸ್ತು ಮಾರಾಟ: ಇಬ್ಬರ ಬಂಧನ

Update: 2018-08-03 16:54 GMT

ಬೆಂಗಳೂರು, ಆ.3: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 4 ಕೆಜಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಅಸ್ಲಾಂ ಹಾಗೂ ಇಮ್ರಾನ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.

ನಗರದ ಬಂಬೂ ಬಜಾರ್ ರಸ್ತೆಯಲ್ಲಿರುವ ಜಟಕಾ ಸ್ಟಾಂಡ್ ಮುಂಭಾಗ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಗಾಂಜಾ ವಶದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ಅಸ್ಸಾಂನಿಂದ 2 ಕೆಜಿ ಗಾಂಜಾ, 1 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಅದೇ ರೀತಿ, ಇಮ್ರಾನ್‌ನಿಂದ 2 ಕೆಜಿ ಗಾಂಜಾ, ಮೊಬೈಲ್, ಬೈಕ್ ವಶಕ್ಕೆ ಪಡೆದು ಇಲ್ಲಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News