ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ಮುಂದುವರಿಕೆ: ಮುಖ್ಯಮಂತ್ರಿ ಸ್ಪಷ್ಟನೆ

Update: 2018-08-03 17:10 GMT

ಬೆಂಗಳೂರು, ಆ.3: ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಇರುವ ನಿರ್ಬಂಧ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. 
ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ (not feasible) ಎಂದು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News