×
Ad

ಸಮಾಜವನ್ನು ಮುನ್ನಡೆಸುವ ಶಕ್ತಿ ಮಹಿಳೆಯರಿಗಿದೆ: ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ರಾವ್

Update: 2018-08-04 19:20 IST

ಉಡುಪಿ, ಆ.4: ಮಹಿಳೆಯರು ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ನಡೆಸಿಕೊಂಡು ಹೋಗುವ ಶಕ್ತಿ ಹೊಂದಿ ದ್ದಾರೆಂಬುದನ್ನು ಇಂದು ಇಡೀ ಜಗತ್ತಿಗೆ ತೋರಿಸಿಕೊಡುತ್ತಿದ್ದಾರೆಂದು ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಹೇಳಿದ್ದಾರೆ.

ಉಡುಪಿ ಮಹಿಳಾ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶನಿವಾರ ಸಂಘದ ಸಭಾಭವನದಲ್ಲಿ ಆಯೋಜಿಸಲಾದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಮಹಿಳೆಯರು ಸಂಘಟಿತರಾದಾಗ ಬಾಂಧವ್ಯ ಬೆಳೆಯುವ ಜೊತೆ ದೇಶ ಹಾಗೂ ಸಮಾಜದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲು ಸಾದ್ಯವಾಗುತ್ತದೆ. ನಾಲ್ಕು ಗೋಡೆಯ ಮಧ್ಯೆ ಸಂಸಾರದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದ ಮಹಿಳೆ ಯರು ಇಂದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿ ಅದನ್ನು ಸಮರ್ಥ ವಾಗಿ ನಿಬಾಯಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಮಹೇಶ್ ಭಂಡಾರಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ವಹಿಸಿದ್ದರು. ಬಡಗುಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ವತ್ಸಲ ಎನ್.ಅಮೀನ್ ಉಪಸ್ಥಿತರಿದ್ದರು. ನಿರ್ದೇಶಕಿ ಲವಿಟಾ ಅಂದ್ರಾದೆ ಸ್ವಾಗತಿಸಿದರು. ಗಿರಿಜಾ ಶಿವರಾವು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News