ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಒಗ್ಗಟ್ಟಾದ ವಿಪಕ್ಷಗಳು
Update: 2018-08-04 20:30 IST
ಹೊಸದಿಲ್ಲಿ, ಆ.4: ಬಿಹಾರದ ಆಶ್ರಮದಲ್ಲಿ ನಡೆದಿರುವ ಬಾಲಕಿಯರ ಮೇಲಿನ ಲೈಂಗಿಕ ಶೋಷಣೆ ಪ್ರಕರಣದ ವಿರುದ್ಧ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಭಾಗವಹಿಸಿದ್ದಾರೆ.
ತೇಜಸ್ವಿ ಯಾದವ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿಪಿಐನ ಡಿ.ರಾಜಾ ಹಾಗು ಅತುಲ್ ಕುಮಾರ್ ಅಂಜನ್, ಎಲ್ ಜೆಡಿಯ ಶರದ್ ಯಾದವ್, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್ ನಾಯಕ ದಿನೇಶ್ ತ್ರಿವೇದಿ ಸೇರಿ ಹಲವರು ಭಾಗವಹಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ ಮುಂದುವರಿಸಿದ್ದಾರೆ.