×
Ad

ನವಿಲು ತೀರ್ಥ ಅಣೆಕಟ್ಟೆಯಿಂದ ನೀರು ಹರಿಸಲು ಪ್ರಾದೇಶಿಕ ಆಯುಕ್ತರಿಗೆ ಸಿದ್ದರಾಮಯ್ಯ ಮನವಿ

Update: 2018-08-04 20:39 IST

ಬೆಂಗಳೂರು, ಆ. 4: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದಾಗಿ ರೈತರಿಗೆ ತೊಂದರೆಯಾಗಿದೆ. ಆದುದರಿಂದ ಮಲಪ್ರಭಾ ನದಿಗೆ ಮತ್ತು ಕಾಲುವೆಗೆ ನವಿಲುತೀರ್ಥ ಅಣೆಕಟ್ಟೆನಿಂದ ನೀರು ಹರಿಸಬೇಕು ಎಂದು ಕೋರಿ ಬಾದಾಮಿ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಮಳೆ ಕೊರತೆ ಹಿನ್ನೆಲೆಯಲ್ಲಿ ಬಾದಾಮಿ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಕೊಳವೆ ಬಾವಿಗಳು ಬತ್ತಿವೆ. ಇದರಿಂದಾಗಿ ಮಲಪ್ರಭಾ ನದಿ ತೀರದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಹದಿನೈದು ದಿನಗಳ ಕಾಲ ನವಿಲುತೀರ್ಥ ಅಣೆಕಟ್ಟೆಯಿಂದ ಮಲಪ್ರಭಾ ನದಿಗೆ ನೀರು ಹರಿಸಬೇಕೆಂದು ಕೋರಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ನಿನ್ನೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಅವರ ಪತ್ರ ಆಧರಿಸಿ ಜಲಾಶಯ ವ್ಯಾಪ್ತಿಯ ಜನಪ್ರತಿನಿಧಿಗಳ ಮತ್ತು ಮುಖಂಡರ ಸಲಹೆ ಪಡೆದು ಕ್ರಮ ತೆಗೆದುಕೊಳ್ಳುವಂತೆ ಮಲಪ್ರಭಾ ಎಡದಂಡೆ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರಿಗೆ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News