ಟೋಪಿ ಬದಲಾವಣೆಗೆ ಮುಂದಾದ ಪೊಲೀಸ್ ಇಲಾಖೆ

Update: 2018-08-04 16:10 GMT

ಬೆಂಗಳೂರು, ಆ.4: ಪೊಲೀಸ್ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಪೊಲೀಸ್ ಇಲಾಖೆಯೂ ಪೇದೆಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಧರಿಸುವ ಟೋಪಿ ಬದಲಾವಣೆಗೆ ಮುಂದಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಶನಿವಾರ ನಗರದ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹೊಸ ಮಾದರಿಯ ಪಿ-ಕ್ಯಾಪ್ ಧರಿಸುವ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ಬಿಸಿಲು, ಗಾಳಿ ಮಳೆಗೆ ರಕ್ಷಣೆ ನೀಡುವ ಪೊಲೀಸ್ ಪೇದೆಗಳ ಟೋಪಿ ಅವರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವರದಿ ಹೇಳಿತ್ತು. ಜೊತೆಗೆ ಪೇದೆಗಳಿಂದಲೂ ದೂರುಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಗಳ ಟೋಪಿ ಬದಲಾವಣೆಗೆ ಹಿರಿಯ ಅಧಿಕಾರಿಗಳು ಮುಂದಾಗಿದ್ದು, ಶೀಘ್ರದಲ್ಲಿಯೇ ಹೊಸ ಟೋಪಿ ಬರಲಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News