×
Ad

​ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಹಜ್ ಯಾತ್ರಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ ಸಚಿವ ಜಮೀರ್ ಅಹ್ಮದ್

Update: 2018-08-04 22:38 IST

ಮಂಗಳೂರು, ಆ.4: ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ನಗರದ ಹಜ್ ಯಾತ್ರಾರ್ಥಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಯಾವುದೇ ವಾಹನ ಸೌಕರ್ಯ ಇಲ್ಲದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ ಖರ್ಚಿನಲ್ಲೇ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚುಗೆಯನ್ನು ಪಡೆದಿದ್ದಾರೆ.

ಆ. 6ರಂದು ಸಂಜೆ ಉಳ್ಳಾಲದಿಂದ ಬೆಂಗಳೂರಿಗೆ ಸುಮಾರು 70 ಕ್ಕೂ ಹೆಚ್ಚು ಹಜ್ ಯಾತ್ರಿಗಳು ತರಳಲು ಎರಡು ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಈ ಹಜ್ ಯಾತ್ರಿಗಳಲ್ಲಿ ಒಂದು ತಂಡವು ಆ. 8ರಂದು ಬೆಳಗ್ಗೆ ಯಾತ್ರೆಯನ್ನು ಕೈಗೊಳ್ಳಲಿದ್ದು, ಮತ್ತೊಂದು ತಂಡವು ಆ. 9ರಂದು ಬೆಳಗ್ಗೆ ಪ್ರಯಾಣ ಬೆಳೆಸಲಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News