ಜನದಟ್ಟಣೆ ಜಾಗದಲ್ಲಿ ಸಿಸಿ-ಕ್ಯಾಮೆರಾ ಕಡ್ಡಾಯ, ಇಲ್ಲದಿದ್ದರೆ ದಂಡ

Update: 2018-08-04 18:03 GMT

ಬೆಂಗಳೂರು, ಆ.4: ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಸಾರ್ವಜನಿಕರು ಜಮಾಯಿಸುವ ಸ್ಥಳಗಳಲ್ಲಿ ಸಿಸಿ-ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ತಪಾಸಣೆ ಯಂತೋತ್ರಪಕರಣ ಇರಬೇಕು. ಇಲ್ಲದಿದ್ದಲ್ಲಿ, ದಂಡ ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಪ್ರಕಟನೆ ಹೊರಡಿಸಿರುವ ಇಲಾಖೆಯು, ಕರ್ನಾಟಕ ಸಾರ್ವಜನಿಕ ಸುರಕ್ಷತೆ ಕಾಯ್ದೆಯನ್ನು ಕಳೆದ ಸಾಲಿನ ಡಿಸೆಂಬರ್‌ನಲ್ಲಿ ಜಾರಿಗೊಳಿಸಲಾಗಿದೆ. ಅದರಂತೆ, ವಾಣಿಜ್ಯ, ಕೈಗಾರಿಕಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆ, ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ರೈಲ್ವೆ, ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕರು ಜಮಾಯಿಸುವ ಜನದಟ್ಟಣೆ ಇರುವ ಸ್ಥಳಗಳಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ದೃಶ್ಯಾವಳಿಗಳನ್ನು 30 ದಿನಗಳ ಕಾಲ ಶೇಖರಿಸುವ ಸಾಮರ್ಥ್ಯ ಇರಬೇಕು. ಅದೇ ರೀತಿ, ದೈಹಿಕ ಮತ್ತು ತಾಂತ್ರಿಕ ಯಂತ್ರೋಪಕರಣಗಳ ಮೂಲಕ ತಪಾಸಣೆ ನಡೆಸಬೇಕಾಗಿದೆ.

ದಂಡ: ಪೊಲೀಸ್ ಆದೇಶ ಒಂದು ತಿಂಗಳ ಮಟ್ಟಿಗೆ ಪಾಲಿಸದೇ ಇದ್ದಲ್ಲಿ 5 ಸಾವಿರ ರೂ. ದಂಡ ವಿಧಿಸಲಾಗುವುದು. ಅಲ್ಲದೆ, ನಿರಂತರ ಪಾಲಿಸದಿದ್ದರೆ, ಸಂಬಂಧಪಟ್ಟ ಸಂಸ್ಥೆಗಳನ್ನು ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕುರಿತು ಮಾಹಿತಿಗಾಗಿ ಪೊಲೀಸ್ ಇಲಾಖೆಯ ವೆಬ್‌ಸೈಟ್ www.ksp.gov.in ಅನ್ನು ನೋಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News