ಉಡುಪಿ: ಸ್ಪೋಟಗೊಂಡ ಲಾರಿಯ ಟಯರ್‌ನಲ್ಲಿ ಬೆಂಕಿ

Update: 2018-08-05 07:05 GMT

ಉಡುಪಿ, ಆ. 5: ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಉಡುಪಿ ಸಮೀಪದ ಕಿನ್ನಿಮುಲ್ಕಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ತುಮಕೂರಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಟಯರ್ ಸ್ಪೋಟಗೊಂಡಿತು. ಕೂಡಲೇ ಚಾಲಕ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದರು. ಈ ಸಂದರ್ಭ ಸ್ಪೋಟಗೊಂಡ ಟಯರ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತೆನ್ನಲಾಗಿದೆ. ತಕ್ಷಣ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡ ಲಾಯಿತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಟಯರ್‌ನಲ್ಲಿನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿ ದಂತಾಯಿತು. ಬೆಂಕಿಯಿಂದ ಟಯರ್ ಸಂಪೂರ್ಣ ಸುಟ್ಟು ಹೋಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News