ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಬೆಳ್ಳಿಗೆ ತೃಪ್ತಿಪಟ್ಟ ಸಿಂಧು

Update: 2018-08-05 09:26 GMT

ನಾನ್‌ಜಿಂಗ್(ಚೀನಾ), ಆ.5: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಎಡವುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ರವಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಿಂಧು ಸ್ಪೇನ್‌ನ ಮೂರು ಬಾರಿಯ ವಿಶ್ವ ಚಾಂಪಿಯನ್ ಆಟಗಾರ್ತಿ ಕರೊಲಿನ್ ಮರಿನ್ ವಿರುದ್ಧ 19-21, 10-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

ಕಳೆದ ವರ್ಷ ಫೈನಲ್‌ಗೆ ತಲುಪಿದ್ದ ಸಿಂಧು ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡನೇ ಬಾರಿ ಎರಡನೇ ಸ್ಥಾನ ಪಡೆದಿದ್ದಾರೆ.

ಮರಿನ್ ಹಾಗೂ ಸಿಂಧು 2016ರ ರಿಯೋ ಒಲಿಂಪಿಕ್ಸ್ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದರು. ಆಗ ಮರಿನ್ ಜಯ ದಾಖಲಿಸಿ ಚಿನ್ನ ಜಯಿಸಿದ್ದರು.

ಸೆಮಿ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯರನ್ನು ಸೋಲಿಸಿ ಫೈನಲ್‌ಗೆ ತಲುಪಿದ್ದ 3ನೇ ಶ್ರೇಯಾಂಕದ ಸಿಂಧು ಈ ಬಾರಿ ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದ್ದರು. ಇದೀಗ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನ ಸಿಂಗಲ್ಸ್ ವಿಭಾಗದಲ್ಲಿ ನಾಲ್ಕನೇ ಪದಕ ಜಯಿಸಿದ ಸಾಧನೆ ಮಾಡಿದರು. ಈ ಹಿಂದೆ ಅವರು ಎರಡು ಬಾರಿ ಕಂಚು ಹಾಗೂ ಒಂದು ಬಾರಿ ಬೆಳ್ಳಿ ಗೆದ್ದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News