ಲಿಂಗದಹಳ್ಳಿ: ಶಾಲಾ ಮಕ್ಕಳಿಗೆ ಉಚಿತ ಶೂ ವಿತರಣೆ

Update: 2018-08-05 11:55 GMT

ಲಿಂಗದಹಳ್ಳಿ, ಆ.5: ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸರಕಾರ ಅನೇಕ ಉಚಿತ ಸೌಲಭ್ಯಗಳನ್ನು ಶಾಲಾ ಮಕ್ಕಳಿಗೆ ನೀಡುತ್ತಿದೆ. ಇವುಗಳನ್ನು ಬಳಸಿಕೊಂಡು ವಿದ್ಯೆ ಕಲಿತು ಉನ್ನತ ಸ್ಥಾನ ಪಡೆಯುವ ಮೂಲಕ ಉತ್ತಮ ಜೀವನ ನಡೆಸುವತ್ತ ಮಕ್ಕಳು ಗಮನ ಹರಿಸಬೇಕು ಎಂದು ಉಡೇವಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಜ್ಞಾನ ಮೂರ್ತಿ ಹೇಳಿದರು. 

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಶೂಗಳನ್ನು ವಿತರಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಶೂ, ಸಮವಸ್ತ್ರ, ನೋಟ್ ಬುಕ್, ಇನ್ನಿತರ ಸೌಲಭ್ಯಗಳನ್ನು ಹಾಳು ಮಾಡದೆ ಉತ್ತಮ ಸ್ಥಿತಿಯಲ್ಲಿ ಬಳಸಿಕೊಳ್ಳಲು ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದು ತಿಳಿಸಿದರು. 

ಪ್ರಭಾರಿ ಮುಖ್ಯ ಶಿಕ್ಷಕಿ ಪ್ರಭಾವತಿ ಮಾತನಾಡಿ, ಈ ಸೌಲಭ್ಯಗಳನ್ನು ಪಡೆದರೆ ಸಾಲದು ಆಸಕ್ತಿಯಿಂದ ಪಾಠ ಪ್ರವಚನದತ್ತ ಗಮನ ಹರಿಸಿ ಉತ್ತಮ ಶ್ರೇಣಿಯಲ್ಲಿ ಪಾಸ್ ಆಗುವ ಮೂಲಕ ಶಾಲೆಗೆ ಹಾಗೂ ಊರಿಗೆ ಹೆಸರು ತರಬೇಕು ಎಂದು ಕಿವಿ ಮಾತು ಹೇಳಿದರು. 

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವರ್ಗದವರು ಹಾಗೂ ಮಕ್ಕಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News