×
Ad

ಉಡುಪಿ : ಅಸಂಘಟಿತ ಕಾರ್ಮಿಕರ ನೋಂದಣಿ ಶಿಬಿರ

Update: 2018-08-06 18:03 IST

ಉಡುಪಿ, ಆ.6: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಉಡುಪಿ ವಲಯ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆಗಳ ಜಂಟಿ ಆಶ್ರಯದಲ್ಲಿ ಗ್ಯಾರೇಜ್ ಕಾರ್ಮಿಕರಿಗಾಗಿ ಅಸಂಘಟಿತ ಕಾರ್ಮಿಕರ ನೋಂದಣಿ ಶಿಬಿರವನ್ನು ಮಣಿಪಾಲ ರಜತಾದ್ರಿಯಲ್ಲಿರುವ ಕಾರ್ಮಿಕ ಇಲಾಖೆ ಕಚೆೀರಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಮತ್ತು ಕಚೇರಿ ಪ್ರಬಂಧಕ ಪ್ರವೀಣ್ ಕುಮಾರ್ ಮಲ್ಯ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ಸಂಘದ ಅಧ್ಯಕ್ಷ ಪ್ರಭಾಕರ್ ಕೆ., ಉಪಾಧ್ಯಕ್ಷ ಜಯ ಸುವರ್ಣ, ಕೋಶಾಧಿಕಾರಿ ರಾಜೇಶ್ ಜತ್ತನ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಗೌರವ ಸಲಹೆ ಗಾರರಾದ ಯಾದವ ಶೆಟ್ಟಿಗಾರ್, ಉದಯ ಕಿರಣ್, ಜೊತೆ ಕಾರ್ಯದರ್ಶಿ ವಿನಯಕುಮಾರ್ ಕಲ್ಮಾಡಿ, ಪದಾಧಿಕಾರಿಗಳಾದ ಪ್ರಶಾಂತ್ ಮೆಂಡನ್, ವಿಜಯ ಸನಿಲ್, ಸಂತೋಷ್ ಕಾಪು, ಜಿಲ್ಲಾ ರಿಕ್ಷಾ ಚಾಲಕ ಮಾಲಕ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ ಅಮೀನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News