ಹಾವಂಜೆ ಬಂಟರ ಸಂಘದ ಪಧಾದಿಕಾರಿಗಳ ಪದಗ್ರಹಣ
ಉಡುಪಿ, ಆ.6: ಬಂಟರ ಸಂಘ ಹಾವಂಜೆ ಇದರ ನೂತನ ಅಧ್ಯಕ್ಷರ ಮತ್ತು ಪಧಾದಿಕಾರಿಗಳ ಪದಗ್ರಹಣ ಸಮಾರಂಭವು ಇತ್ತೀಚೆಗೆ ಇರ್ಮಾಡಿ ಶೆಟ್ಟಿಬೆಟ್ಟುವಿನಲ್ಲಿ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಬಂಟರ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಬಳ್ಳಾರಿಯ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಮುಂಬಯಿ ಉದ್ಯಮಿ ಸದಾಶಿವ ಹೆಗ್ಡೆ ತನಿಷ್ಕಾಬಾಣಬೆಟ್ಟು ಜೊತೆಯಾಗಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಉದ್ಯಮಿ ಉದಯ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡನಿಡಂಬೂರು, ಕೊಡವೂರು ಬಂಟರ ಸಂಘದ ಅಧ್ಯಕ್ಷ ಶಿವ ಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ ತೋನ್ಸೆ, ನಿಕಟಪೂರ್ವ ಅಧ್ಯಕ್ಷ ಅನಿಲ್ ಬಿ.ಶೆಟ್ಟಿ, ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ವಿನಯ ಶೆಟ್ಟಿ, ಕೋಶಾಧಿ ಕಾರಿ ಸತೀಶ್ ಶೆಟ್ಟಿ, ಮಹಿಳಾ ಘಟಕದ ಕಾರ್ಯದರ್ಶಿ ಸುಗುಣ ಶೆಟ್ಟಿ, ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರಗಳಾದ ಮನ್ಮಥ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿ ಹಾಗೂ ಅಂತಾರಾಷ್ಟ್ರೀಯ ಕರಾಟೆ ಸ್ಫರ್ಧೆಯಲ್ಲಿ ಭಾಗವಹಿಸಲಿ ರುವ ದೀಕ್ಷಿತ್ ಶೆಟ್ಟಿ ಬಾಣಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಅಧ್ಯಕ್ಷ ಭಾಸ್ಕರ ಬಿ.ಶೆಟ್ಟಿ ಮುಗ್ಗೇರಿ ಕೆಳಮನೆ ವಹಿಸಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಎಸ್.ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ವಂದಿಸಿದರು. ಶಿಕ್ಷಕ ಪ್ರಶಾಂತ ಶೆಟ್ಟಿ ಮತ್ತು ಸೂರಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.