ಬೆಂಗಳೂರು: ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಮೃತ್ಯು

Update: 2018-08-06 12:36 GMT

ಬೆಂಗಳೂರು, ಆ.6: ಪ್ರತ್ಯೇಕ ಎರಡು ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಗರ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ದೊಡ್ಡಸಣೆಯ ನಿವಾಸಿ ಗಿರೀಶ್(22) ಮತ್ತು ನರಸಿಂಹಮೂರ್ತಿ(56) ಎಂಬುವರು ಮೃತಪಟ್ಟಿರುವ ವ್ಯಕ್ತಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ಗಿರೀಶ್ ಎಂಬಾತ ಕಾರು ಚಾಲನೆ ಮಾಡಿಕೊಂಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಹುಣಸಮಾರನಹಳ್ಳಿ ಸಮೀಪ ಹೋಗುತ್ತಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಬದಿಯ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಗಿರೀಶ್‌ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ರಸ್ತೆ ದಾಟುತ್ತಿದ್ದ ನರಸಿಂಹಮೂರ್ತಿ ಎಂಬವರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News