×
Ad

ಮೂಡುಬಿದಿರೆ ಕಡಲಕೆರೆಗೆ 25 ಸಾವಿರ ಮೀನು ಮರಿಗಳ ಸಮರ್ಪಣೆ

Update: 2018-08-06 18:24 IST

ಮೂಡುಬಿದಿರೆ,ಆ.6 :  ಇಲ್ಲಿನ ಒಂಟಿಕಟ್ಟೆಯ ಕಡಲಕೆರೆಗೆ ಕಾಟ್ಲಾ ಮತ್ತು ರೋಹೂ ಸಹಿತ ವಿವಿಧ ಜಾತಿಯ 25 ಸಾವಿರ ಮೀನು ಮರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಸಮರ್ಪಿಸಿ ನಂತರ ದೋಣಿ ವಿಹಾರಕ್ಕೆ ಚಾಲನೆಯನ್ನು ನೀಡಿದರು.   

ನಂತರ ಮಾತನಾಡಿದ ಅವರು, ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಕಡಲಕೆರೆಯನ್ನು ಪ್ರವಾಸೋದ್ಯಮ ಇಲಾಖೆಯ ಸಹಕಾರದೊಂದಿಗೆ ಮಿನಿ ಪಿಲಿಕುಳವಾಗಿ ಅಭಿವೃದ್ಧಿ ಪಡಿಸಲು ಪ್ರಯತ್ನಿಸುವುದಾಗಿ ಹೇಳಿದರು. 
ಬಳಿಕ ಸಾಲು ಮರದ ತಿಮ್ಮಕ್ಕ ಉದ್ಯಾನವನದಲ್ಲಿ ಗಿಡಗಳನ್ನು ನೆಡಲಾಯಿತು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಜಿ. ಪಂ ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಡಾ. ರಮೇಶ್, ಪ್ರಭಾರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ಪುರಸಭಾ ಸದಸ್ಯರಾದ ಪಿ.ಕೆ. ಥೋಮಸ್, ದಿನೇಶ್ ಪೂಜಾರಿ, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಸಾದ್ ಕುಮಾರ್, ಪುತ್ತಿಗೆ ಗ್ರಾ.ಪಂ ಸದಸ್ಯರಾದ ನಾಗವರ್ಮ ಜೈನ್, ಶಶಿಧರ್ ಅಂಚನ್, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ದಿವ್ಯಾ, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ ಗಾಣಿಗ, ಅಶ್ವಿತ್ ಗಟ್ಟಿ, ಚಂದ್ರಕಾಂತ್ ವಿ.ಪೋಳ್, ಅಗ್ನಿಶಾಮಕ ಠಾಣಾಧಿಕಾರಿ ಕಿಶೋರ್ ಕುಮಾರ್, ಬೋಟಿಂಗ್ ನಿರ್ವಾಹಕ ಡಾ.ಎಂ.ಎಸ್ ನಜೀರ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News