ವಿವೇಕಾನಂದ, ಬಸವಣ್ಣರನ್ನು ಕೊಲೆಗೈಯಲಾಗಿದೆ ಎಂಬ ಭಗವಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪೇಜಾವರಶ್ರೀ

Update: 2018-08-06 15:14 GMT

ಮೈಸೂರು,ಆ.6: ವಿದ್ಯಾವಂತರು ಧರ್ಮ ಒಡೆಯುವ ಕೆಲಸ ಮಾಡಬಾರದು ಎಂದು ಪೇಜಾವರ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರು, ಸ್ವಾಮಿ ವಿವೇಕಾನಂದ ಮತ್ತು ಬಸವಣ್ಣ ಅವರನ್ನು ಕೊಲೆ ಮಾಡಲಾಗಿದೆ ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರೊ.ಕೆ.ಎಸ್.ಭಗವಾನ್ ಅವರು ವಿದ್ಯಾವಂತರು, ವಿಚಾರವಂತರು. ಅಂತವರು ಧರ್ಮ ಒಡೆಯುವ ಕೆಲಸ ಮಾಡಬಾರದು. ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಕೆಲಸ ಮಾಡಬೇಕು. ಇವರ ಹೇಳಿಕೆ ಆಧಾರ ರಹಿತವಾದದ್ದು ಎಂದು ಹೇಳಿದರು.

ಪ್ರತ್ಯೇಕ ರಾಜ್ಯದ ಅಗತ್ಯವಿಲ್ಲ: ಉತ್ತರ ಕರ್ನಾಟಕ ಎಂಬ ಪ್ರತ್ಯೇಕತೆ ಇಲ್ಲ. ಅಖಂಡ ಕರ್ನಾಟಕದಲ್ಲಿ ಎಲ್ಲರೂ ಒಂದೇ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯದಲ್ಲಿ ವೀರಶೈವ ಮತ್ತು ಲಿಂಗಾಯತರು ಒಂದೇ. ವೀರಶೈವ ಬೇರೆಯಲ್ಲ, ಲಿಂಗಾಯತ ಬೇರೆಯಲ್ಲ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News