ಸರಕಾರ ಉರುಳಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Update: 2018-08-06 20:46 IST
ಬೆಂಗಳೂರು, ಆ.6: ಬಿಜೆಪಿ ನಾಯಕರು ಹತಾಶರಾಗಿದ್ದು, ಏನಾದರೂ ಮಾಡಿ ರಾಜ್ಯ ಸರಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಮೂವರು ಮುಖ್ಯಮಂತ್ರಿಗಳಿದ್ದಾರೆಂದು ಬಿಜೆಪಿ ಮಾಡಿರುವ ಟ್ವಿಟ್ ಕುರಿತು ಸೋಮವಾರ ಕೆ.ಆರ್.ಪುರದ ಕೇಂಬ್ರಿಡ್ಜ್ ಮಹಾವಿದ್ಯಾಲಯದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಬಿಜೆಪಿಯವರು ಯಾರ ಬಳಿ ಮಾತನಾಡುತ್ತಿದ್ದಾರೆ ಎಂಬುದು ನಮಗೆ ಎಲ್ಲ ಗೊತ್ತು. ಕಾಲವೇ ಎಲ್ಲದಕ್ಕೂ ತಕ್ಕ ಉತ್ತರ ನೀಡುತ್ತದೆ ಎಂದು ಶಿವಕುಮಾರ್ ಮಾರ್ಮಿಕವಾಗಿ ನುಡಿದರು.