ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Update: 2018-08-06 18:13 GMT

ಮಂಗಳೂರು, ಆ.6: ಪ್ರಸಕ್ತ ಸಾಲಿನಲ್ಲಿ ಮುಂಬರುವ ವರ್ಷಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಸಾಧನೆ ದಾಖಲಿಸುವ ಸಾಧ್ಯತೆ ಇರುವ ಕ್ರೀಡಾಪಟುಗಳಿಂದ ಕರ್ನಾಟಕ ಸ್ಪೋರ್ಟ್ಸ್ ಅಕಾಡಮಿ ಫಾರೆಕ್ಸ್‌ಲೆನ್ಸ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಕ್ರೀಡಾಪಟುಗಳ ವಯೋಮಿತಿ ಗರಿಷ್ಠ 25 ವರ್ಷ ಮಿತಿಯಿರಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಅರ್ಜಿಯನ್ನು ಪಡೆದು ಆ.20 ಒಳಗೆ ಕಚೇರಿಗೆ ಸಲ್ಲಿಸಬಹುದೆಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News