×
Ad

ಶೇ.50ರ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

Update: 2018-08-06 23:51 IST

ಉಡುಪಿ, ಆ.6: ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಟಿಸಿರುವ ಸುಮಾರು 360 ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ತಿಂಗಳು ಪೂರ್ತಿ ಶೇ.50ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯ ಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪ್ರಾಧಿಕಾರದ ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ.50ರ ರಿಯಾಯಿತಿಯಲ್ಲಿ ಅಂದರೆ www.kannadapustaka pradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516/ 22107704/05ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News