ನ್ಯಾಯವಾದಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ: ಡಾ.ಜಿ.ಪರಮೇಶ್ವರ್

Update: 2018-08-07 14:32 GMT

ಬೆಂಗಳೂರು, ಆ.7: ಇತ್ತೀಚೆಗಷ್ಟೇ ಸಾವನ್ನಪ್ಪಿದ ದಾಂಡೇಲಿಯ ವಕೀಲ ಅಜಿತ್ ನಾಯಕ್ ಪ್ರಕರಣದ ತನಿಖೆ ನಡೆಯುತ್ತಿದ್ದು, ನ್ಯಾಯ ಸಿಗದೆ ಹೋದರೆ ವಿಶೇಷ ತನಿಖೆಗೆ ವಹಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಅಡ್ವೋಕೇಟ್ ಅಸೋಸಿಯೇಷನ್ ಆಫ್ ಬೆಂಗಳೂರು ಹಾಗೂ ದಾಂಡೇಲಿಯ ಸದಸ್ಯರು, ಅಜಿತ್ ನಾಯಕ್ ಕೊಲೆ ಪ್ರಕರಣವನ್ನು ಸಿಐಡಿ ಅಥವಾ ವಿಶೇಷ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಅಜಿತ್ ನಾಯಕ್ ಪ್ರಕರಣದ ತನಿಖೆ ಈಗಾಗಲೆ ನಡೆಯುತ್ತಿದೆ. ಈ ತನಿಖೆಯಲ್ಲಿ ನ್ಯಾಯ ಸಿಗದೇ ಹೋದರೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ನ್ಯಾಯವಾದಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಜವಾಬ್ದಾರಿ ಎಂದು ಪರಮೇಶ್ವರ್ ಹೇಳಿದರು.

ಈ ಸಂದರ್ಭದಲ್ಲಿ ಅಡ್ವೋಕೇಟ್ ಅಸೋಸಿಯೇಷನ್ ಆಫ್ ಬೆಂಗಳೂರು ಅಧ್ಯಕ್ಷ ರಂಗನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News