ಹಿಂ.ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ: ಬಿಜೆಪಿಯಿಂದ ಹರ್ಷಾಚರಣೆ

Update: 2018-08-07 14:59 GMT

ಉಡುಪಿ, ಆ.7: ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿ ಧಾನಿಕ ಮಾನ್ಯತೆ ನೀಡುವ ಪ್ರಮುಖ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಜಿಲ್ಲಾ ಬಿಜೆಪಿ ಕಚೇರಿ ಎದುರು ಹರ್ಷಾಚರಣೆ ನಡೆಸಲಾಯಿತು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೇಶದಲ್ಲಿ ಶೇ.50ಕ್ಕಿಂತ ಹೆಚ್ಚಿರುವ ಹಿಂದುಳಿದವರ್ಗದವರಿಗೆ ಸಂಬಂಧಿಸಿದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸ್ವಾತಂತ್ರ ದೊರೆತ 70 ವರ್ಷಗಳ ನಂತರ ಮೋದಿ ಸರಕಾರ ಸಂವಿಧಾನ ಬದ್ಧ ಮಾನ್ಯತೆ ನೀಡಿರುವುದು ಹೆಮ್ಮೆಯ ವಿಚಾರ. ಈ ದೇಶದಲ್ಲಿ ಹಿಂದುಳಿದವರ್ಗಗಳ ಪರ ವಾದ ನಿಜವಾದ ಪಕ್ಷ ಯಾವುದು ಎಂಬುದನ್ನು ಈಗ ಜೆಡಿಎಸ್ ಹಾಗೂ ಕಾಂಗ್ರೆಸ್‌ನವರು ಹೇಳಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಶ್ಯಾಮಲಾ ಕುಂದರ್, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ಯಶ್ಪಾಲ್ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್, ಸುಪ್ರಸಾದ್ ಶೆಟ್ಟಿ, ಕುತ್ಯಾರ್ ನವೀನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News