×
Ad

ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018 ಧ್ವನಿಸುರುಳಿ ಬಿಡುಗಡೆ

Update: 2018-08-07 20:50 IST

ಉಡುಪಿ, ಆ.7: ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018 ಸ್ವಚ್ಛತಾ ಆಂದೋಲನ ಕಾರ್ಯಕ್ರಮ ದೇಶಾದ್ಯಂತ ಆ.1ರಿಂದ31ರವರೆಗೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ನಿಯೋಜಿತ ಸಮೀಕ್ಷಾ ತಂಡ ಜಿಲ್ಲೆಗಳಿಗೆ ಭೇಟಿ ನೀಡಿ ಸ್ವಚ್ಛತಾ ಸಮೀಕ್ಷೆ ನಡೆಸಲಿದೆ.

ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ 2018 ಸ್ವಚ್ಛತಾ ಆಂದೋಲನದ ಬಗ್ಗೆ ಮಾಹಿತಿ, ತಿಳುವಳಿಕೆ ನೀಡಲು ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಗ್ರಾಮ ಮಟ್ಟದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರಯುಕ್ತ ಮಂಗಳವಾರ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಸ್ವಚ್ಛತಾ ಘೋಷಣೆ ಹಾಡುಗಳು, ಖ್ಯಾತ ವ್ಯಕ್ತಿಗಳ ಹೇಳಿಕೆಗಳ ನ್ನೊಳಗೊಂಡ ಸಿಡಿಯೊಂದನ್ನು ಬಿಡುಗಡೆಗೊಳಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018ರ ಕುರಿತು ಮಾಹಿತಿ ನೀಡಿದರು. ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ಜಿಪಂ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News