×
Ad

ಆ.9: ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ

Update: 2018-08-07 20:59 IST

ಉಡುಪಿ, ಆ.7: ಕನ್ನಡ ಸಾರಸ್ವತ ಲೋಕದಲ್ಲಿ ಹೆಸರಾದಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯನ್ನು ತುಮಕೂರಿನ ಕವಿ ಡಾ.ಕೆ.ಪಿ. ನಟರಾಜ್ ಇವರ ‘ನಿತ್ಯವೂ ನಿನ್ನೊಡನೆ’ ಕವನ ಸಂಕಲನಕ್ಕೆ ಆ.9ರ ಗುರುವಾರ ಬೆಳಗ್ಗೆ 10:30 ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟದಲ್ಲಿ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಪ್ ಹೈಯರ್ ಎಜ್ಯುಕೇಶನ್ ಇದರ ಜಂಟಿ ಆಶ್ರಯದಲ್ಲಿ ನಡೆಯಲಿದೆ. ಖ್ಯಾತ ಪತ್ರಕರ್ತ ಜಿ.ಎನ್. ಮೋಹನ್ ಕೃತಿಯನ್ನು ಬಿಡುಗಡೆಗೊಳಿಸಿ ‘ಸಾಹಿತ್ಯ ಮತ್ತು ಪತ್ರಿಕೋದ್ಯಮ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು.

ಕೃತಿ ಕುರಿತು ಹಿರಿಯ ವಿಮರ್ಶಕ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಭಾಗವಹಿಸು ವರು. ಹಿರಿಯ ವಿದ್ವಾಂಸ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಶಸ್ತಿ ಸಮಿತಿಯ ಸದಸ್ಯರಾದ ಕಡೆಂಗೋಡ್ಲು ಈಶ್ವರ ಭಟ್ ಹಾಗೂ ಡಾ.ಕೆ.ಎಸ್. ಭಟ್ ಮಣಿಪಾಲ ಉಪಸ್ಥಿತರಿರುವರು ಎಂದು ಕೇಂದ್ರ ದ ಸಂಯೋಜಕರಾದ ಪ್ರೊ. ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News