ಆ.9: ಕ್ವಿಟ್ ಇಂಡಿಯಾ ಚಳವಳಿಯ 76ನೇ ವರ್ಷಾಚರಣೆ
Update: 2018-08-07 22:50 IST
ಮಂಗಳೂರು, ಆ.7: ದ.ಕ. ಜಿಲ್ಲಾ ಕಾಂಗ್ರೆಸ್‌ಯಿಂದ ಆ. 9ರಂದು ಕ್ವಿಟ್ ಇಂಡಿಯಾ ಚಳವಳಿಯ 76ನೇ ವರ್ಷಾಚರಣೆಯ ಪ್ರಯುಕ್ತ ಮಂಗಳೂರಿನ ಬಾವುಟಗುಡ್ಡೆಯಿಂದ ಕಾಲುಜಾಥಾ ಹೊರಟು ಪುರಭವನದಲ್ಲಿ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್‌ಕುಮಾರ್‌ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ಐವನ್ ಡಿಸೋಜ ಹಾಗೂ ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.