ಯುಪಿಎ ಸರಕಾರದ ಜೊತೆ ನಿಂತಿದ್ದ ಕರುಣಾನಿಧಿ: ಡಾ.ಜಿ.ಪರಮೇಶ್ವರ್

Update: 2018-08-08 13:51 GMT

ಬೆಂಗಳೂರು, ಆ.8: ತಮಿಳುನಾಡು ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಕರುಣಾನಿಧಿ ಅವರ ನಿಧನ ರಾಜಕಾರಣದಲ್ಲಿ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪಅವರ 18ನೆ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಯುಪಿಎ ಎರಡು ಬಾರಿ ಕೇಂದ್ರದಲ್ಲಿ ಸರಕಾರ ರಚಿಸಿದಾಗ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಕಾಂಗ್ರೆಸ್ ಪರ ನಿಂತಿದ್ದಕ್ಕೆ ನಾವೆಲ್ಲಾ ಕರುಣಾನಿಧಿ ಅವರಿಗೆ ಆಭಾರಿಯಾಗಿದ್ದೇವೆ. ಈಗಲೂ ಡಿಎಂಕೆ ಪಕ್ಷ ಕಾಂಗ್ರೆಸ್ ಜೊತೆಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News