ವಿದ್ಯಾಸಿರಿ ಯೋಜನೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2018-08-08 14:55 GMT

ಬೆಂಗಳೂರು, ಆ.8: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2018-19ನೆ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ 15 ಸಾವಿರ ರೂ.ವಿದ್ಯಾರ್ಥಿವೇತನ ನೀಡಲು ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದವರಾಗಿರಬೇಕು, ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರಕಾರಿ, ಸ್ಥಳೀಯ ಸಂಸ್ಥೆ, ಅನುದಾನಿತ ಸಂಸ್ಥೆಗಳು, ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ-ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.

ಪ್ರವರ್ಗ-1ರ ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ 2.50 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು. ಪ್ರವರ್ಗ-2ಎ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಅಂಬೇಡ್ಕರ್ ವೀದಿಯಲ್ಲಿನ ವಿವಿ ಗೋಪುರದ 1ನೆ ಮಹಡಿಯಲ್ಲಿರುವ ಬೆಂಗಳೂರು ನಗರ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಅಥವಾ ವೆಬ್‌ಸೈಟ್ https://gokdom.kar.nic.in ಅನ್ನು ನೋಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News