ಕಡಬ: ಗೂಡ್ಸ್ ಟೆಂಪೊ ಪಲ್ಟಿ; ಮಹಿಳೆ ಸೇರಿ ಇಬ್ಬರು ಮೃತ್ಯು

Update: 2018-08-09 06:47 GMT

ಕಡಬ, ಆ.9: ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಕಾರ್ಮಿಕರನ್ನು ನೆಲ್ಯಾಡಿ ಸಮೀಪದ ಕೊಕ್ಕಡ ನಿವಾಸಿಗಳಾದ ಚಿನ್ನಮ್ಮ (55) ಹಾಗೂ ಹರೀಶ್ (30) ಎಂದು ಗುರುತಿಸಲಾಗಿದೆ. ಟೆಂಪೊದಲ್ಲಿದ್ದ ಗೀತಾ (38) ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ವಿಶ್ವನಾಥ್, ಕಿರಣ್, ಜಾನಕಿ, ನಿತೇಶ್, ಹೇಮಾವತಿ, ರಾಜು, ನವೀನ್, ಮುತ್ತಪ್ಪ, ಭವಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ 407 ಟೆಂಪೊ ಕಲ್ಲಾಜೆ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News