ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ: ಪರಮೇಶ್ವರ್

Update: 2018-08-09 08:10 GMT

ತುಮಕೂರು, ಆ.9: ‘‘ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ವಿಚಾರವನ್ನು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸ್ಪಷ್ಟಪಡಿಸಿದ್ದಾರೆ’’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಪರಮೇಶ್ವರ್ ಸಮ್ಮಿಶ್ರ ಸರಕಾರವನ್ನು ಮುನ್ನಡೆಸುವುದು ಸುಲಭಸಾಧ್ಯವಲ್ಲ ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡರು.

‘‘ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾರಿಗೆ ಬಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ ಸಹಿತ ಹಲವು ಬಡಜನರಿಗೆ ನೆರವಾಗುವ ಯೋಜನೆಯನ್ನು ಮುಂದುವರಿಸಲು ಜೆಡಿಎಸ್‌ನೊಂದಿಗೆ ಆಂತರಿಕವಾಗಿ ಒಪ್ಪಂದ ಮಾಡಿಕೊಂಡಿದ್ದೇವೆ. ಹೊಂದಾಣಿಕೆಯೊಂದಿಗೆ ಸರಕಾರವನ್ನು ಮುನ್ನಡೆಸುವುದು ತುಂಬಾ ಕಷ್ಟಕರ. ಆದರೆ, ಇದು ನಮಗೆ ಅನಿವಾರ್ಯವಾಗಿದೆ’’ ಎಂದು ಪರಮೇಶ್ವರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News