ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಆ. 9: ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು ಅಲ್ಪಸಂಖ್ಯಾತರಾದ ಮುಸ್ಲಿಮ್, ಕ್ರೈಸ್ತ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಆ.31. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ನಗರ ದಕ್ಷಿಣ ಜಿಲ್ಲೆ, ಉತ್ತರ ವಿಭಾಗ, ಹಾಗೂ ಕೇಂದ್ರೀಯ ವಿಭಾಗ, ನಂ.29/27, 1ನೆ ಮಹಡಿ, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು-2. ಅಥವಾ 40, 2ನೆ ಅಡ್ಡರಸ್ತೆ, ಇಂಜಿನಿಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೆ ಮುಖ್ಯರಸ್ತೆ ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು-32.
ದೂರವಾಣಿ ಸಂಖ್ಯೆ-080-2353 9786 ಅಥವಾ ವೆಬ್‌ಸೈಟ್ ವಿಳಾಸ: ಅರಿವು ಯೋಜನೆಗೆ kmdc.kar.nic.in/arivu2 ಅಥವಾ ಇತರ ಯೋಜನೆಗಳಿಗೆ kmdc.kar.nic.in/loan/login.aspx ನ್ನು ನೋಡಬಹುದಾಗಿದೆ ಎಂದು ಪ್ರಕಟಣೆ ಕೋರಿದೆ.