ಬಾರಮುಲ್ಲಾ: ಇನ್ನೋರ್ವ ಉಗ್ರನ ಮೃತದೇಹ ಪತ್ತೆ

Update: 2018-08-09 15:11 GMT

ಶ್ರೀನಗರ, ಆ. 9: ಜಮ್ಮು ಹಾಗೂ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಅರಣ್ಯದ ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಉಗ್ರನೋರ್ವನ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

 ಉತ್ತರಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ರಫೀಬಾದ್‌ನ ಲಾದೂರ ಅರಣ್ಯದ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಗುರುವಾರ ಬೆಳಗ್ಗೆ ಉಗ್ರನೋರ್ವನ ಮೃತದೇಹ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಸೋಮವಾರ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಬುಧವಾರ ನಾಲ್ವರು ಉಗ್ರರನ್ನು ಹತ್ಯೆಗೈದಿತ್ತು. ಈ ಘಟನೆಯಲ್ಲಿ ಓರ್ವ ಯೋಧ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News