×
Ad

ತೆಂಕನಿಡಿಯೂರು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Update: 2018-08-09 21:08 IST

ಉಡುಪಿ, ಆ.9:ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.

ನಿಟ್ಟೆ ಕೆ.ಎಸ್.ಹೆಗ್ಡೆ ಇನ್‌ಸ್ಟಿಟ್ಯೂಟ್ ಆಪ್ ಮ್ಯಾನೇಜೆಮೆಂಟ್‌ನ ಪ್ರಾಧ್ಯಾಪಕ ಡಾ.ಟಿ.ಪಿ.ಎಂ. ಪಕ್ಕಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಧಿಸುವ ಛಲವೊಂದಿದ್ದರೆ ಯಾವುದೇ ಅಡತಡೆಗಳು ಎದುರಾದರೂ ಸಮರ್ಥವಾಗಿ ಎದುರಿಸುವ ಮಾರ್ಗವನ್ನು ವಿದ್ಯಾರ್ಥಿಗಳು ತಾವಾಗಿಯೇ ಕಂಡುಕೊಳ್ಳುತ್ತಾರೆ ಎಂದರು.

ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕ ಪ್ರೊ.ಮಹೇಶ್ ರಾವ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ.ದುಗ್ಗಪ್ಪ ಕಜೆಕಾರ್, ಪ್ರೊ. ಉಮೇಶ್ ಪೈ, ವಾಣಿಜ್ಯ ವಿಬಾಗದ ಮೇವಿ ಮಿರಾಂದ, ಶರ್ಮಿಳಾ ಹಾರಾಡಿ, ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ರಾಘವ ನಾಯ್ಕೊ ಸ್ವಾಗತಿಸಿ, ಕನ್ನಡ ವಿಭಾಗ ಸಂಯೋಜಕ ಡಾ. ವೆಂಕಟೇಶ್ ಹೆಚ್.ಕೆ ವಂದಿಸಿದರು. ಆಂಗ್ಲ ಭಾಷಾ ಮುಖ್ಯಸ್ಥ ಪ್ರೊ. ಪ್ರಸಾದ್ ರಾವ್ ಪ್ರಾಸ್ತಾವಿಕ ಮಾತನಾಡಿದರೆ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಗೋಪಾಲಕೃಷ್ಣ ಗಾಂವ್ಕರ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News