ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಧರಣಿ

Update: 2018-08-09 15:42 GMT

ಉಡುಪಿ, ಆ.9: ಕೇಂದ್ರ ಸರಕಾರದ ಕಾರ್ಮಿಕ ಹಾಗೂ ಜನವಿರೋಧಿ ನೀತಿಯ ವಿರುದ್ಧ ಸಿಐಟಿಯು ಉಡುಪಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗುರುವಾರ ಉಡುಪಿ ತಾಲೂಕು ಕಚೇರಿಯ ಎದುರು ರೈತ ಕಾರ್ಮಿಕ, ಕೂಲಿ ಕಾರರ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಸಿಐಟಿಯು ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಮಾತನಾಡಿ, ಬಂಡವಾಳ ಪರ ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಕೈಬಿಟ್ಟು, ಕಟ್ಟುನಿಟ್ಟಿನ ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಬೇಕು. ಎಲ್ಲ ಕಾರ್ಮಿಕರಿಗೂ ಮಾಸಿಕ 18ಸಾವಿರ ರೂ. ಸಮಾನ ಕನಿಷ್ಠ ವೇತನ ನೀಡಬೇಕು. ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಕಾರ್ಮಿಕರ ಖಾಯಂಗೆ ಶಾಸನ ತರಬೇಕು. ನಿರುದ್ಯೋಗ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮುಖಂಡರಾದ ಉಮೇಶ್ ಕುಂದರ್, ಶೇಖರ್ ಬಂಗೇರ, ನಳಿನಿ, ಕವಿರಾಜ್, ಕೆ.ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News