×
Ad

ಸ್ಥಳೀಯ ಸಂಸ್ಥೆ ಚುನಾವಣೆ: ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ

Update: 2018-08-09 21:15 IST

ಉಡುಪಿ, ಆ.9: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಉಡುಪಿ ನಗರಸಭೆ, ಕುಂದಾಪುರ ಮತ್ತು ಕಾರ್ಕಳ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ವಿಳಾಸದಲ್ಲಿ ಆಯುಧ ಪರವಾನಗಿ ಹೊಂದಿರುವ ಪರವಾನಗಿದಾರರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದುಗುಂಡುಗಳನ್ನು ಹೊಂದಿರುವುದು, ಹಿಡಿದು ಸಂಚರಿಸುವುದು ಹಾಗೂ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವ ಎಲ್ಲಾ ಅಧಿಕೃತ ಪರವಾನಗಿದಾರರು ತಮ್ಮ ಪರವಾನಗಿಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್/ ಡಿಬಿಬಿಎಲ್/ಎಸ್‌ಬಿಎಂಎಲ್/ಡಿಬಿಎಂಎಲ್/ಎನ್‌ಪಿಬಿ/ ರೈಪಲ್) ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಗಿ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಮಾತ್ರ ವಿಳಂಬ ಮಾಡದೇ ಕಡ್ಡಾಯವಾಗಿ ತಕ್ಷಣವೇ ಠೇವಣಿ ಮಾಡಿ ರಶೀದಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News